Film & EntertainmentKarnataka NewsPolitics

*ನಕಲಿ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್: ಸೋಷಿಯಲ್ ಮೀಡಿಯಾದಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ: ಕಮಿಷನರ್ ಗೆ ದೂರು ನೀಡಿದ ಎಸ್.ನಾರಾಯಣ್*

ಪ್ರಗತಿವಾಹಿನಿ ಸುದ್ದಿ: ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಹೆಸರಿನಲ್ಲಿ ಸೋಷಿಯಲ್ ಮೀಡಿಯಾಗಳಲ್ಲಿ ನಕಲಿ ಖಾತೆ ತೆರೆದು ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಎಸ್.ನಾರಾಯಣ್ ಹೆಸರಲ್ಲಿ ನಕಲಿ ಖಾತೆ ತೆರೆದು ಕನ್ನಡದ ಸ್ಟಾರ್ ನಟರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದ್ದು, ಈ ಬಗ್ಗೆ ಎಸ್.ನಾರಾಯಣ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ನಾರಾಯಣ್, ನನ್ನ ಹೆಸರಿನಲ್ಲಿ ನಕಲಿ ಅಕೌಂಟ್ ತೆರೆದು ಕಿಡಿಗೇಡಿಗಳು ಕೆಟ್ಟದಾಗಿ ಪೋಸ್ಟ್ ಮಾಡುತ್ತಿದ್ದಾರೆ. ಅಪ್ಪು, ಶಿವಣ್ಣ, ಸುದೀಪ್ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ. ನನ್ನ ಹೆಸರಲ್ಲಿ ಈರೀತಿ ಮಾಡುತ್ತಿದ್ದಾರೆಂದು ನನಗೆ ಗೊತ್ತಿರಲಿಲ್ಲ. ಕೆಲ ತಿಂಗಳಿಂದ ಈ ರೀತಿ ಮಾಡುತ್ತಿದ್ದಾರೆ. ನನ್ನ ಸ್ನೇಹಿತರು ನಾಲ್ಕೈದುದಿನಗಳ ಹಿಂದೆ ನನ್ನ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಪೋಸ್ಟ್ ಮಾಡಿದವರ ವಿರುದ್ಧ ದೂರು ನೀಡಿ, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದರು.

ಸೋಷಿಯಲ್ ಮೀಡಿಯಾದಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಕರ್ನಾಟಕದಲ್ಲಿ ಇಂತಹ ಪ್ರಕರಣ ಹೆಚ್ಚುತ್ತಿರುವುದು ಕನ್ನಡಿಗರಿಗೆ ಅವಮಾನ.ಒಂದು ಚೌಕಟ್ಟು ದಾಟಬಾರದು. ತೇಜೋವಧೆ ಮಾಡಬಾರದು ಎಂದರು.

Home add -Advt

ಫ್ಯಾನ್ಸ್ ವಾರ್ ಈ ಹಿಂದೆಯೂ ಇತ್ತು. ಆದರೆ ಯಾವುದೂ ಮಿತಿಮಿರಿ ಹೋಗುತ್ತಿರಲಿಲ್ಲ. ಈಗಿನ ಬೆಳವಣಿಗೆ ನೋಡಿದರೆ ಚಿತ್ರರಂಗ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬ ಆತಂಕವಾಗುತ್ತದೆ. ಇದು ಸರಿಯಲ್ಲ. ನಾವು ತಲೆತಗ್ಗಿಸುವಂತೆ ಆಗುತ್ತಿದೆ. ಪ್ರತಿಯೊಬ್ಬರೂ ಕೂಡ ನಾಗರಿಕರು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಮಾನವರಾಗಿ ಹೇಗೆ ಮಾತನಾಡಬೇಕು ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

Related Articles

Back to top button