ಪ್ರಗತಿವಾಹಿನಿ ಸುದ್ದಿ, ಚೆನ್ನೈ: ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕೊರೊನಾ ಪಾಸಿಟೀವ್ ಹಿನ್ನೆಲೆಯಲ್ಲಿ ಎಸ್ ಪಿಬಿ ಅವರಿಗೆ ಚೆನ್ನೈನ ಎಂಜಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಎರಡು ದಿನಗಳಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ.
ಈ ಕುರಿತು ಚೆನ್ನೈನ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕೋವಿಡ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಸ್.ಪಿ.ಬಾಲಸುಬ್ರಹ್ಮಣಂ ಅವರು ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾದರು. ಆಗಸ್ಟ್ 13ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ತಜ್ಞ ವೈದ್ಯರ ಸಲಹೆಯಂತೆ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿಸಿದೆ.
ಈ ಹಿಂದೆ ಎಸ್ ಪಿಬಿ, ತಮಗೆ ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ನನ್ನ ಕುಟುಂಬದ ಹಿತದೃಷ್ಟಿಯಿಂದ ನಾನು ಸ್ವಯಂ ಆಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಯೊಂದಿಗೆ ವಿಶ್ರಾಂತಿ ಪಡೆಯುತ್ತಿರುವುದಾಗಿ ಹೇಳಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ