Latest

ಸಂಗೀತ ಕ್ಷೇತ್ರದ ಕೊಂಡಿಯೊಂದು ಕಳಚಿದಂತಾಗಿದೆ: ಎಸ್ ಪಿಬಿ ನಿಧನಕ್ಕೆ ಸಿಎಂ ಸಂತಾಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ದಕ್ಷಿಣ ಭಾರತದ ಎಲ್ಲಾ ಭಾಷೆಗಳ ಚಲನ ಚಿತ್ರ ಗೀತೆಗಳಿಗೆ ಹಿನ್ನಲೆ ಗಾಯನ ಮಾಡಿದ್ದ ಎಸ್ ಪಿಬಿ, ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೆಷ ಅಭಿಮಾನ ಹೊಂದಿದ್ದರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಆದರೆ ಇದೀಗ ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ, ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು. 10ಕ್ಕೂ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು ಎಂದು ಎಸ್‍ಪಿಬಿ ಸಾಧನೆಯನ್ನು ಕೊಂಡಾಡಿದ್ದಾರೆ.

ಎಸ್ ಪಿಬಿ ಅವರ ನಿಧನ ತೀವ್ರ ದು:ಖತಂದಿದ್ದು, ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇನ್ನು ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಶೋಕ ವ್ಯಕ್ತಪಡಿದ್ಸಿದ್ದು, ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿ, ದಶಕಗಳ ಕಾಲ ನಮ್ಮೆಲ್ಲರನ್ನು ರಂಜಿಸಿದ್ದ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.

Home add -Advt

 

Related Articles

Back to top button