Beereshwara 27
Emergency Service

ಜೂ.6 ರಂದು ದಿ. ಎಸ್. ಆರ್. ಬೊಮ್ಮಾಯಿ ಜನ್ಮ ಶತಮಾನೋತ್ಸವ ಆಚರಣೆ

ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಎಜ್ಯುಕೇಶನ್ ಮತ್ತು ವೆಲ್ ಫೇರ್ ಫೌಂಡೇಶನ್ ವತಿಯಿಂದ ಆಯೋಜನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್. ಬೊಮ್ಮಾಯಿಯವರ 99ನೇ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಜೂನ್ 6 ರಂದು ಸಂಜೆ 5ಕ್ಕೆ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಎಜ್ಯುಕೇಶನ್ ಮತ್ತು ವೆಲ್ ಫೇರ್ ಫೌಂಡೇಶನ್ ವತಿಯಿಂದ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ   ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಿ. ಎಸ್. ಆರ್. ಬೊಮ್ಮಾಯಿಯವರ ಕುರಿತು ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್ ನವರು ಹೊರ ತಂದಿರುವ ಕಾಫಿ ಟೇಬಲ್ ಪುಸ್ತಕವನ್ನು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ಪದ್ಮವಿಭೂಷಣ  ಎಸ್. ಎಂ. ಕೃಷ್ಣ ಅವರು ಬಿಡುಗಡೆ ಮಾಡಲಿದ್ದಾರೆ‌.
ಕಾರ್ಯಕ್ರಮದ ಆಧ್ಯಕ್ಷತೆಯನ್ನು ಮಾಜಿ ಸಚಿವ ಆರ್.ವಿ. ದೇಶಪಾಂಡೆ ವಹಿಸಲಿದ್ದಾರೆ‌.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.‌ಸಿ. ಸೋಮಶೇಖರ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್, ಮಾಜಿ ಸಭಾಪತಿಗಳಾದ ಶ್ರೀ ಬಿ.ಎಲ್‌. ಶಂಕರ್ ಅವರು ಕೃತಿ ಕುರಿತು ಮಾತನಾಡಲಿದ್ದಾರೆ.

ಕಾರ್ಯಕ್ರಮದ ಆರಂಭಕ್ಕೂ ಮುನ್ನ ಖ್ಯಾತ ಹಿನ್ನೆಲೆ ಗಾಯಕಿ ನಾಗಚಂದ್ರಿಕಾ ಭಟ್ ಅವರ ಗಾಯನ ಕಾರ್ಯಕ್ರಮ ಇದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.

https://pragati.taskdun.com/amit-shahs-stern-warning-sent-shockwaves-144-weapons-surrendered-in-manipur/

https://pragati.taskdun.com/waliboallsports-manwest-bengalkarnatakareach/

https://pragati.taskdun.com/mandyalorrycaraccident4-people-death/

Bottom Ad 1
Bottom Ad 2

You cannot copy content of this page