Latest

ಕುಳ್ಳ ದೇವರಾಜ್ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪಾರಿ ಕೇಸ್ ವಿಡಿಯೋ ಮಾಡಿದ್ದ ಕುಳ್ಳ ದೇವರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿ ಸುಪಾರಿ ನೀಡಿದ್ದ ವಿಡಿಯೋ ಬಹಿರಂಗವಾಗಿತ್ತು ಕುಳ್ಳ ದೇವರಾಜ್ ಎಂಬಾತನ ಜೊತೆ ಮಾತನಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ಸ್ವತ: ದೇವರಾಜ್ ಈ ವಿಡಿಯೋ ಮಾಡಿದ್ದ ಎನ್ನಲಾಗಿದೆ. ಅಲ್ಲದೇ ಕುಳ್ಳ ದೇವರಾಜ್ ಎಸ್.ಆರ್.ವಿಶ್ವನಾಥ್ ಅವರಿಗೆ ಕ್ಷಮಾಪಣೆ ಪತ್ರವನ್ನು ರವಾನಿಸಿದ್ದನು. ಈ ಬಗ್ಗೆ ರಾಜಾನುಕುಂಟೆ ಠಾಣೆ ಪೊಲೀಸರಿಗೆ ನಿನ್ನೆ ವಿಶ್ವನಾಥ್ ದೂರು ನೀಡಿದ್ದರು.

ವಿಡಿಯೋ ಬಹಿರಂಗವಾಗುತ್ತಿದ್ದಂತೆ ಆರೋಪಿ ಕುಳ್ಳ ದೇವರಾಜ್ ನನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಿದ್ದರು. ಇದೀಗ ಆತನನ್ನು ಬಂಧಿಸಿ, ರಾಜಾನುಕುಂಟೆ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಎಸಿಬಿ ದಾಳಿಗೊಳಗಾದ ಅಧಿಕಾರಿ; ಹೃದಯಾಘಾತದಿಂದ ಮೃತಪಟ್ಟ ಪತ್ನಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button