Kannada NewsKarnataka NewsLatestPolitics

*BREAKING: ಸಿಎಂ ಮುಂದೆ ರಾಜೀನಾಮೆ ಪ್ರಸ್ತಾಪ ಮುಂದಿಟ್ಟ ಸಚಿವ ಎಸ್.ಎಸ್.ಮಲ್ಲಿಕಾರ್ಜುನ!*

ಕುತೂಹಲ ಮೂಡಿಸಿದ ನಡೆ


ಪ್ರಗತಿವಾಹಿನಿ ಸುದ್ದಿ: ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾತು ಕೇಳಿಬಂದಿದೆ.

ವಾರದ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಸಚಿವ ಮಲ್ಲಿಕಾರ್ಜುನ, ರಾಜೀನಾಮೆ ಪ್ರಸ್ತಾಪವಿಟ್ಟಿದ್ದಾರೆ ಎನ್ನಲಾಗಿದೆ. ತನ್ನನ್ನು ಸಚಿವ ಸ್ಥಾನದಿಂದ ಬಿಡುಗಡೆಗೊಳಿಸಿ. ವ್ಯಾವಹಾರಿಕ ಒತ್ತಡ ಹಾಗೂ ಕ್ಷೇತ್ರದ ಕೆಲಸದ ಒತ್ತಡವಿರುವುದರಿಂದ ಸಚಿವ ಸ್ಥಾನದಿಂದ ಬಿಡುಗಡೆ ಮಾಡುವಂತೆ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮಗನಿಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಪರೋಕ್ಷವಾಗಿ ರಾಜೀನಾಮೆ ಪ್ರಸ್ತಾಪ ಮುಂದಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಎಸ್.ಎಸ್.ಮಲ್ಲಿಕಾರ್ಜುನ ಅವರ ನಡೆ ಕುತೂಹಲ ಮೂಡಿಸಿದೆ.

Home add -Advt

Related Articles

Back to top button