
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು. ನಾಡಿನಲ್ಲಿ ಮಳೆ, ಬೆಳೆ ಆಗಿ ಸಮೃದ್ಧವಾಗಿ ಆಡಳಿತ ನಡೆಸುವಂತೆ ಆಗಲಿ ಎಂದು ತಿಮ್ಮಕ್ಕ ಶುಭ ಹಾರಿಸಿದರು.
ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಜೊತೆಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕ ಅವರಿಗೆ ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಾಕು ಮಗ ಬಳ್ಳೂರು ಉಮೇಶ್ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ