Latest

ಐದು ದಿನಗಳ ಕಾಲ ತೆರೆಯಲಿದೆ ಶಬರಮಲೆ ಅಯ್ಯಪ್ಪ ದೇವಾಲಯದ ಬಾಗಿಲು

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಅ.16ರಿಂದ ಐದು ನಿಗಳ ಕಾಲ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ತೆರೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಭಕ್ತರಿಗೆ ಕೊವಿಡ್ ಟೆಸ್ಟ್ ಕಡ್ಡಾಯವಾಗಿದೆ.

ಅ.16ರಿಂದ ಅ.21ರವರೆಗೆ ಮಾತ್ರ ಐಯ್ಯಪ್ಪ ದೇವಾಲಯದ ಬಾಗಿಲು ತೆರೆಯಲಿದ್ದು, ಒಂದು ದಿನಕ್ಕೆ 250 ಭಕ್ತರಿಗೆ ಮತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಶಬರಿಮಲೆಗೆ ಬರುವ ಭಕ್ತರಿಗೆ ನೀಲಕ್ಕಲ್ ಕ್ಯಾಂಪ್ ನಲ್ಲಿ ಕೊವಿಡ್ ಟೆಸ್ಟ್ ಮಾಡಲಾಗುತ್ತಿದ್ದು, ನೆಗೆಟಿವ್ ಬಂದರೆ ಮಾತ್ರ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

Home add -Advt

ಇನ್ನು ದೇವಾಲಯಕ್ಕೆ ಬರುವ ಭಕ್ತರು ವರ್ಚುವಲ್ ಕ್ಯೂ ಮೂಲಕ ದೇವರ ದರ್ಶನಕ್ಕೆ ಬುಕ್ ಮಾಡಬೇಕಿದ್ದು, ದರ್ಶನಕ್ಕೆ ಒಂದುವರೆ ಗಂಟೆ ಮೊದಲು ಪಂಪಾದಲ್ಲಿ ಇರಬೇಕು. ಆದರೆ ಪಂಪಾ ನಡಿಯಲ್ಲಿ ಭಕ್ತರ ಸ್ನಾನಕ್ಕೆ ನಿಷೇಧ ಹೇರಲಾಗಿದ್ದು, ಇದಕ್ಕಾಗಿ ಶವರ್ ವ್ಯವಸ್ಥೆ ಮಾಡಲಾಗಿದೆ.

 

Related Articles

Back to top button