ಪ್ರಗತಿವಾಹಿನಿ ಸುದ್ದಿ; ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿನ್ ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಅವರು ಹೋಂ ಕ್ವಾರಂಟೈನ್ ನಲ್ಲಿದ್ದರು. ಈಗ ವೈದ್ಯರ ಸಲಹೆ ಮೇರೆಗೆ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಸ್ವತ: ಸಚಿನ್ ಮಾಹಿತಿ ನೀಡಿದ್ದು, ಕೋವಿಡ್ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಯಂತೆ ಆಸ್ಪತ್ರೆಗೆ ದಾಖಲಾಗಿದ್ದು, ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಕೋವಿಡ್ ಲಸಿಕೆ ಪಡೆದ 14 ವೈದ್ಯರಲ್ಲಿ ಸೋಂಕು ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ