ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಸದಲಗಾ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೋವಿಡ್ ಪರೀಕ್ಷೆ ಹಾಗೂ ಲಸಿಕೆ ನೀಡುವ ಕಾರ್ಯವನ್ನು ಸೂಕ್ತ ರೀತಿಯಲ್ಲಿ ನಡೆಸುವಂತೆ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ.ಯಶೋದಾ ಬಬನಿ, ಪುರಸಭೆ ಮುಖ್ಯಾಧಿಕಾರಿ ಪ್ರಸನ್ನ ಕಲ್ಯಾಣಶೇಟ್ಟಿ , ಪಿ.ಎಸ್.ಆಯ. ಆರ್.ವಾಯ. ಬೀಳಗಿ, ಪುರಸಭೆ ಸದಸ್ಯರಾದ ಆನಂದ ಪಾಟೀಲ, ಅಭಿನಂದನ ಪಾಟೀಲ, ರಾಜು ಅಮೃತಸಮನ್ನವರ, ಪ್ರಶಾಂತ ಕರಂಗಳೆ, ಹೇಮಂತ ಶಿಂಗೆ, ಕೇತನ ಪಾಟೀಲ, ದರೇಪ್ಪಾ ಹವಾಲದಾರ, ತಾತ್ಯಾಸಾಬ ನಿಡಗುಂದೆ ಹಾಗೂ ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ