Kannada NewsKarnataka NewsLatestPolitics

ಕೇಸರಿ ನಮ್ಮ ಸಂಪ್ರದಾಯ, ಸಂಸ್ಕೃತಿಯ ಪ್ರತೀಕ, ನಮ್ಮ ನಂಬಿಕೆಯ ಹೆಗ್ಗುರುತು: JDS ಅಚ್ಚರಿಯ ಹೇಳಿಕೆ

*ಕೇಸರಿ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಉರಿ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅಚ್ಛರಿಯ ಬೆಳವಣಿಗೆಯಲ್ಲಿ ಜಾತ್ಯತೀತ ಜನತಾದಳ ಸ್ಪಷ್ಟವಾಗಿ ಕೇಸರಿತ್ತ ವಾಲಿದೆ. ಕೇಸರಿ ನಮ್ಮ ಸಂಪ್ರದಾಯ, ಸಂಸ್ಕೃತಿಯ ಪ್ರತೀಕ. ನಮ್ಮ ನಂಬಿಕೆಯ ಹೆಗ್ಗುರುತು. ಸ್ವಧರ್ಮದ ಬಗ್ಗೆ ಗೌರವವೇ ಇಲ್ಲದವರಿಗೆ, ಓಲೈಕೆ ಮಾಡಿಕೊಂಡೇ ಒಲೆ ಉರಿಸಿಕೊಳ್ಳುವವರಿಗೆ ಆಚಾರ ವಿಚಾರಗಳ ಪಾವಿತ್ರ್ಯತೆ ಎಲ್ಲಿ ಗೊತ್ತಾಗಬೇಕು? ಕೊಳಕು ಮನಸ್ಸಿನವರಿಗೆ ಕೇಸರಿಯೂ ರಾಜಕೀಯದ ಸರಕು ಎಂದು ಜೆಡಿಎಸ್ ಪಕ್ಷವು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಜೆಡಿಎಸ್ ಆ ಪಕ್ಷವನ್ನು ಗೊಸುಂಬೆ, ಊಸರವಳ್ಳಿ ಎಂದು ಜರೆದಿದೆ.

ಗೊಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷದಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ. ಕುಮಾರಸ್ವಾಮಿ ಅವರು ಹಾಗಲ್ಲ. ಏನಾದರೂ ಹೇಳಬೇಕೆಂದರೆ; ನೇರ, ದಿಟ್ಟ, ನಿಷ್ಠುರ. ಏನೇ ಬಂದರೂ ಎದುರಿಸುವ ಕೆಚ್ಚು ಅವರದ್ದು, ಪಲಾಯನ ಮಾಡುವ ಪೈಕಿ ಅವರಲ್ಲ ಎಂದು ಕಿಡಿಕಾರಿದೆ ಜೆಡಿಎಸ್.

RSS ಬಗ್ಗೆ ಕುಮಾರಸ್ವಾಮಿ ಅವರು ಹಿಂದೆ ಮಾತನಾಡಿದ್ದಾರೆ, ಬರೆದಿದ್ದಾರೆ, ನಿಜ. ಟೀಕೆ ಮಾಡಿದ್ದಾರೆನ್ನುವುದೂ ಹೌದು. ಹಾಗೆಯೇ, ಕಲ್ಲಡ್ಕ ಪ್ರಭಾಕರ ಭಟ್ಟರು ನಡೆಸುತ್ತಿರುವ ಶ್ರೀರಾಮ ವಿದ್ಯಾಲಯಕ್ಕೆ ಭೇಟಿ ನೀಡಿದಾಗಲೂ ಅವರು ಏನು ಹೇಳಬೇಕೋ ಅದನ್ನೇ ಹೇಳಿದ್ದಾರೆ. ಕಾಮಾಲೆ ಕಣ್ಣಿನ, ಕುತ್ಸಿತ ಕಿವಿಯ ಕಾಂಗ್ರೆಸ್ ಗೆ ಅದೆಲ್ಲಾ ಗೊತ್ತಾಗುವುದೇ ಇಲ್ಲ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಪ್ರಭಾಕರ ಭಟ್ಟರ ಶಾಲೆಯಲ್ಲಿ, ನಿನ್ನೆ ದಿನ ಮಂಡ್ಯದಲ್ಲಿ ಕುಮಾರಸ್ವಾಮಿ ಅವರು ಮಾಡಿರುವ ಭಾಷಣಗಳನ್ನು ಕಾಂಗ್ರೆಸ್ಸಿಗರು ಕೇಳಲಿ. ಕೊಳೆತು ನಾರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕೊಚ್ಚೆಯೇ ಸಹ್ಯವಾಗಿದೆಯೇ ಹೊರತು ಸತ್ಯವಲ್ಲ. ವೀರೇಂದ್ರ ಪಾಟೀಲರ ಕಾಲದಲ್ಲಿ (1989) ಚನ್ನಪಟ್ಟಣ, ರಾಮನಗರದಲ್ಲಿ ಬೆಂಕಿ ಹಾಕಿ ರಾಜಕೀಯ ಬೇಳೆ ಬೇಯಿಸಿಕೊಂಡ ಗಿರಾಕಿಗಳು ನೀವು? ಹಿರಿಯರಾದ ವೀರೇಂದ್ರ ಪಾಟೀಲರ ಜೀವಕ್ಕೆ ಕ್ಷೋಭೆ ಕೊಟ್ಟ ಆಸಾಮಿಗಳೂ ನೀವೇ? ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದಿದೆ ಜೆಡಿಎಸ್.

ಕೇಸರಿ ಬಗ್ಗೆ ಹೇಳಿದ್ದೀರಿ, ಸರಿ. ಅದು ನಮ್ಮ ಸಂಪ್ರದಾಯ, ಸಂಸ್ಕೃತಿಯ ಪ್ರತೀಕ. ನಮ್ಮ ನಂಬಿಕೆಯ ಹೆಗ್ಗುರುತು. ಸ್ವಧರ್ಮದ ಬಗ್ಗೆ ಗೌರವವೇ ಇಲ್ಲದವರಿಗೆ, ಓಲೈಕೆ ಮಾಡಿಕೊಂಡೇ ಒಲೆ ಉರಿಸಿಕೊಳ್ಳುವವರಿಗೆ ಆಚಾರ ವಿಚಾರಗಳ ಪಾವಿತ್ರ್ಯತೆ ಎಲ್ಲಿ ಗೊತ್ತಾಗಬೇಕು? ಕೊಳಕು ಮನಸ್ಸಿನವರಿಗೆ ಕೇಸರಿಯೂ ರಾಜಕೀಯದ ಸರಕು!! ಎಂದು ಜೆಡಿಎಸ್ ಪಕ್ಷವು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಅವರು RSS ಕಾಲಾಳೋ, ಸೇವಕರೋ ಎನ್ನುವುದು ಕಾಲವೇ ನಿರ್ಣಯಿಸುತ್ತದೆ. ಆದರೆ, ನಿಮ್ಮ ಸಿದ್ದಹಸ್ತನಂತೆ ಉಂಡ ಮನೆಗೆ ಎರಡು ಬಗೆಯುವ ಪೈಕಿ ಅವರಲ್ಲ. ಮಾತೃಭೂಮಿಯನ್ನು, ಪರಂಪರಾಗತ ಆಚಾರ-ವಿಚಾರ, ನಂಬಿಕೆಗಳಿಗೆ ಕೊಳ್ಳಿ ಇಟ್ಟು ಜಾತಿ-ಧರ್ಮಗಳ ನಡುವೆ ವಿಷಪ್ರಾಶನ ಮಾಡಿ, ಅದನ್ನೇ ಅಮಲೇರಿಸಿಕೊಳ್ಳುವ ಗತಿಗೆಟ್ಟ ಕಾಂಗ್ರೆಸ್ ಮನಸ್ಥಿತಿಗೆ ಆ ಹನುಮದೇವರೇ ಅಂತ್ಯ ಕಾಣಿಸುತ್ತಾನೆ. ಇದು ಸತ್ಯ.. ಸತ್ಯ ಎಂದು ಹೇಳಿದೆ ಜೆಡಿಎಸ್.

ಕೋರ್ ಕಮಿಟಿ ಸಭೆ:

ಜಿಟಿ ದೇವೆಗೌಡ ಅವರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು. ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ,  ವೆಂಕಟರಾವ್ ನಾಡಗೌಡ, ಹೆಚ್.ಕೆ.ಕುಮಾರಸ್ವಾಮಿ, ಆಲ್ಕೊಡ್ ಹನುಮಂತಪ್ಪ, ರಾಜೂಗೌಡ ಪಾಟೀಲ, ಕೆ.ಎ.ತಿಪ್ಪೇಸ್ವಾಮಿ , ಎ.ಮಂಜು, ಸುರೇಶ್ ಗೌಡ, ಕೆ.ಎಂ.ಕೃಷ್ಣಾರೆಡ್ಡಿ, ರಾಜಾ ವೆಂಕಟಪ್ಪ ನಾಯಕ, ಟಿ.ಎ.ಶರವಣ, ಬಿ.ಎಂ.ಫಾರೂಕ್, ಹೆಚ್.ಎಂ.ರಮೇಶ್ ಗೌಡ, ಚಂದ್ರಶೇಖರ್, ಪ್ರಸನ್ನ ಕುಮಾರ್, ಸುನೀತಾ ಚೌಹಾಣ್, ಸುಧಾಕರ ಶೆಟ್ಟಿ, ವೀರಭದ್ರಪ್ಪ ಹಾಲರವಿ, ದೊಡ್ಡನಗೌಡ ಪಾಟೀಲ, ತಿಮ್ಮರಾಯಪ್ಪ ಸೂರಜ್ ನಾಯಕ್ ಸೋನಿ ಭಾಗವಹಿಸಿದ್ದರು.

Related Articles

Back to top button