ಪ್ರಗತಿವಾಹಿನಿ ಸುದ್ದಿ, ಮುಗಳಖೋಡ: ರಾಯಬಾಗ ತಾಲೂಕು ಸುಕ್ಷೇತ್ರ ಮುಗಳಖೋಡ ಪಟ್ಟಣದ ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡು ಕಂಗೊಳಿಸುತ್ತಿರುವ ಶ್ರೀ ಶಿರಡಿ ಸಾಯಿಬಾಬಾರ ನೂತನ ದೇವಸ್ಥಾನದ ಉದ್ಘಾಟನೆ, ಕಳಸಾರೋಹಣ, ಜು.14ರಂದು ನಡೆಯಲಿದೆ .
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪುರಸ್ಕೃತ ಡಾ. ಸಿ.ಬಿ.ಕುಲಿಗೋಡ, ಅಂದು ಬೆಳಿಗ್ಗೆ 11 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಪುಷ್ಪವೃಷ್ಟಿ ಕಾರ್ಯಕ್ರಮ ನೆರವೇರಲಿದೆ ಎಂದರು.
ಜು.13, 14 ಮತ್ತು 15 ರಂದು ಕಾರ್ಯಕ್ರಮವು ಸಡಗರ ಸಂಭ್ರಮದಿಂದ ಜರುಗಲಿದ್ದು, 13 ರಂದು ಮುಂಜಾನೆ ಬೆಳಿಗ್ಗೆ 6 ಗಂಟೆಗೆ ಶ್ರೀ ಕುಲಭೂಷಣ ಉಪಾಧ್ಯಾಯ ಅವರಿಂದ ಹೋಮ ಹಾಗೂ ಶ್ರೀ ಸಾಯಿಬಾಬಾರ ಮೂರ್ತಿಗೆ ವಿಶೇಷವಾದ ಪೂಜೆ, ಅಭಿಷೇಕ, ಅನ್ನಸಂತರ್ಪಣೆ ನೆರವೇರುವುದು. 11 ಗಂಟೆಗೆ ಪುರಸಭೆ ಸದಸ್ಯೆ ಅಂಜಲಿ, ಸಂಜಯ್ ಕುಲಗೋಡ, ಪುರಸಭೆಯ ಮುಖ್ಯಾಧಿಕಾರಿ ಮಹೇಂದ್ರ ತಿಮ್ಮಾಣ್ಣಿ ಅವರ ಮುಂದಾಳತ್ವದಲ್ಲಿ ಮುಗಳಖೋಡ ಹಾಗೂ ಅರಣ್ಯ ಇಲಾಖೆ ರಾಯಬಾಗ ಇವರ ಸಹಯೋಗದಲ್ಲಿ ಮುಗಳಖೋಡ ಪಟ್ಟಣದ ವಿವಿಧ ಭಾಗಗಳಲ್ಲಿ ಸಸಿ ನೆಡುವ ವಿನೂತನ ಕಾರ್ಯಕ್ರಮ ನೆರವೇರುವುದು.
14 ರಂದು ಬೆಳಿಗ್ಗೆ 10 ಗಂಟೆಗೆ ಅಚಲೇರಿ- ಜಿಡಗಾ ಮಠದ ಶ್ರೀ ಬಸವರಾಜೇಂದ್ರ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಹಿರಿಯರಾದ ಪರಪ್ಪ ಖೇತಗೌಡರ ಅವರ ಮನೆಯಿಂದ ಪಂಚಲೋಹದ ಕಳಶ ಹಾಗೂ ಶ್ರೀ ಸಾಯಿಬಾಬಾರ ಭಾವಚಿತ್ರದ ಭವ್ಯ ಮೆರವಣಿಗೆಯು ವಿವಿಧ ಕಲಾ ಬಳಗದೊಂದಿಗೆ ಸುಮಂಗಲಿ ರಿಂದ ಕುಂಭಮೇಳ ಆರತಿಯೊಂದಿಗೆ ಭವ್ಯ ಮೆರವಣಿಗೆಯು ಜರಗುವುದು.
ಬೆಳಿಗ್ಗೆ 12 ಗಂಟೆಗೆ ಅಚಲೇರಿ ಜಿಡಗಾ ಮಠದ ಪರಮಪೂಜ್ಯರು ಶ್ರೀ ಬಸವರಾಜೇಂದ್ರ ಮಹಾಸ್ವಾಮಿಗಳ ಸನ್ನಿಧಾನದಲ್ಲಿ, ಸಹಕಾರಿ ಧುರೀಣರು, ತಾಲೂಕು ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರು, ಪ್ರತಾಪರಾವ್ ಪಾಟೀಲ ಹಾಗೂ ಡಾಕ್ಟರ್ ಸಿ.ಬಿ.ಕುಲಿಗೋಡ ನೇತೃತ್ವದಲ್ಲಿ ನೂತನ ಶ್ರೀ ಸಾಯಿಬಾಬಾರ ದೇವಸ್ಥಾನದ ಹಾಗೂ ಶಿಖರ ಹಾಗೂ ಕಳಶದ ಮೇಲೆ ಹೆಲಿಕ್ಯಾಪ್ಟರ್ ಮೂಲಕ ಪುಷ್ಪಾರ್ಪಣೆ ನೆರವೇರುವುದು.
ಮಧ್ಯಾಹ್ನ 3 ಗಂಟೆಗೆ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಅಚಲೇರಿ- ಜಿಡಗಾ ಮಠದ ಶ್ರೀ ಬಸವರಾಜೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಸಂಜಯ ಕುಲಗೋಡ ಸಭೆಯ ಅಧ್ಯಕ್ಷತೆ ವಹಿಸುವರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗೌರವ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಪ್ರದಾನ ಹಾಗೂ ಸಸಿ ವಿತರಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಾಹಿತಿ, ವಿದ್ವಾಂಸ, ವಿಶ್ರಾಂತ ಪ್ರಾಚಾರ್ಯ ಡಾ. ವಿ.ಎಸ್.ಮಾಳಿ ಅವರನ್ನು ಗೌರವಿಸಲಾಗುವುದು ಎಂದು ಅವರು ತಿಳಿಸಿದರು.
ಸ್ವಯಂ ಪ್ರೇರಿತ ರಕ್ತದಾನ ಶಿಬಿರ:
ರಾಷ್ಟ್ರೀಯ ಸೇವಾ ಯೋಜನೆ, ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಮತ್ತು ಯೂತ್ ರೆಡ್ ಕ್ರಾಸ್ ಇವರ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜರಗುವುದು. ಸುಮಾರು 200ಕ್ಕೂ ಅಧಿಕ ಯುವಕ-ಯುವತಿಯರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಲು ತೀರ್ಮಾನಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
15 ರಂದು ಬೆಳಿಗ್ಗೆ 10 ಗಂಟೆಗೆ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರಿಂದ ಪ್ರವಚನ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಡಾ. ಸಿ.ಬಿ.ಕುಲಗೋಡ ಸಭೆಯ ಅಧ್ಯಕ್ಷತೆ ವಹಿಸುವರು. ರಾಜ್ಯಸಭಾ ಮಾಜಿ ಸದಸ್ಯ, ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮತ್ತಿತರರು ಉಪಸ್ಥಿತರಿರುವರು ಎಂದು ಸಂಸ್ಥೆಯ ಅಧ್ಯಕ್ಷರು ಸಂಜಯ ಕುಲಗೋಡ ತಿಳಿಸಿದರು.
ಸಚಿವರಾದ ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೋಲ್ಲೆ, ಕೆಎಂಎಫ್ ರಾಜ್ಯಾಧ್ಯಕ್ಷ ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ, ಮಾಜಿ ಸಚಿವ ಹಾಲಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯರು ಲಕ್ಷ್ಮಣ ಸವದಿ, ಲಖನ್ ಜಾರಕಿಹೊಳಿ, ಚೆನ್ನರಾಜ ಹಟ್ಟಿಹೊಳಿ, ಪ್ರಕಾಶ ಹುಕ್ಕೇರಿ, ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ, ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ, ಮಾಜಿ ಸಚಿವ ವೀರಕುಮಾರ ಪಾಟೀಲ, ಸಂಜು ಬಾನೆ (ಸರ್ಕಾರ) ಮತ್ತಿತರ ಗಣ್ಯರು ಆಗಮಿಸುವರು.
ಕಾಲೇಜು ಪ್ರಾಚಾರ್ಯ ಮಧುಸೂದನ ಬೀಳಗಿ, ಪದವಿ ಕಾಲೇಜು ಪ್ರಾಚಾರ್ಯ ಎಸ್.ಆರ್.ಕಂಬಾರ, ಮುಖ್ಯೋಪಾಧ್ಯಾಯ ಎಸ್.ಎಸ್ ಮದಾಳೆ, ಪುರಸಭೆಯ ಸದಸ್ಯ ಮಹಾವೀರ ಕುರಾಡೆ, ರಾಮಚಂದ್ರ ಕುರಡೆ, ಸುಖದೇವ ಕರಿಭೀಮಗೋಳ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಮುಂದಿನ 72 ಗಂಟೆಗಳಲ್ಲಿ ಭಾರಿ ಮಳೆ; ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ