Latest

ಬಾಬಾ ಮಂದಿರದಲ್ಲಿ ಬೆಂಕಿ; ಇಬ್ಬರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಸಾಯಿಬಾಬಾ ಮಂದಿರದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಹಾರಾಷ್ಟ್ರದ ಕಾಂದಿವಲಿಯಲ್ಲಿ ನಡೆದಿದೆ.

ಮೃತರನ್ನು ಸುಭಾಷ್ ಖೋಡೆ(25) ಹಾಗೂ ಯುವರಾಜ್ ಪವಾರ್ (25) ಎಂದು ಗುರುತಿಸಲಾಗಿದೆ.

Home add -Advt

ದೇವಾಲಯದ ಬಾಗಿಲು ಮುಚ್ಚಿ ಒಳಗೆ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಏಕಾಏಕಿ ಬೆಂಕಿ ಸಂಭವಿಸಿದೆ. ಕ್ಷಣಾರ್ಧದಲ್ಲಿ ಬೆಂಕಿ ಕೆನ್ನಾಲಿಗೆ ಮಂದಿರ ವ್ಯಾಪಿಸಿದೆ. ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

 

Related Articles

Back to top button