Kannada NewsPolitics

*ಬಿಜೆಪಿಗೆ ಬಿಗ್ ಶಾಕ್: ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ತೀವ್ರ ಅಸಮಾಧಾನಗೊಂಡಿದ್ದ ಸಂಸದ ಸಂಗಣ್ಣ ಕರಡಿ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಂಗಣ್ಣ ಕರಡಿ ಅವರಿಗೆ ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಸಚಿವ ಶಿವರಾಜ್ ತಂಗಡಿ, ಶಾಸಕ ಲಕ್ಷ್ಮಣ ಸವದಿ ಮೊದಲಾದವರು ಉಪಸ್ಥಿತರಿದ್ದರು.

Home add -Advt

Related Articles

Back to top button