ಪ್ರಗತಿವಾಹಿನಿ ಸುದ್ದಿ: ಬಂಧಿತರಾಗಿದ್ದ ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಗೆ ನಾಂಪಲ್ಲಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಪುಷ್ಪ-2 ಚಿತ್ರ ಪ್ರದರ್ಶನದ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದರು. ಈ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಅವರನ್ನು ಬೆಳಿಗ್ಗೆಯಷೇ ಬಂಧಿಸಿದ್ದ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಇದೀಗ ಕೋರ್ಟ್ ನಟನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಜೈಲುಪಾಲಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ