
ಪ್ರಗತಿವಾಹಿನಿ ಸುದ್ದಿ: ಸಿಜೆಪಿ ಪಾರ್ಟಿ ನಡೆಸಿದ ಸಂಸತ್ ಮೆರವಣಿಗೆಯ ಮೇಲೆ ಲಾಠಿ ಚಾರ್ಜ್ ನಡೆಸಿದರು. ಇದನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇದನ್ನು ವಿರೋಧಿಸಿ ಇಂದು ಅಯೋಧ್ಯೆಯಲ್ಲಿ ಸಂತರು ಆಕ್ರೋಶ ಹೊರ ಹಾಕಿದ್ದಾರೆ.
ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬೆನ್ನಲ್ಲೇ ಕಾಂಗ್ರೆಸ್ ಪ್ರಧಾನಿ ಮೋದಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆಯನ್ನು ವಿರೋಧಿಸಿ ಸಂತರು ಇಂದು ರಾಹುಲ್ ಗಾಂಧಿ ಅವರ ಫೋಟೋಗೆ ಬೆಂಕಿ ಇಟ್ಟು ಆಕ್ರೋಶ ಹೊರ ಹಾಕಿದ್ದಾರೆ.
ರಾಹುಲ್ ಗಾಂಧಿಯವರ ಪೋಸ್ಟರ್ ಅನ್ನು ಸುಡುತ್ತಾ ಜಗದ್ಗುರು ಪರಮಹಂಸ ಆಚಾರ್ಯ, ಅವನು ಸಂಸತ್ ಭವನದ ಮೇಲೆ ದಾಳಿ ಮಾಡಲು ಯೋಜಿಸಿದ್ದನು. ಪ್ರಧಾನ ಮಂತ್ರಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದನು. ಅವನು ಪಾಪಿ, ಅವನು ಬೇಗ ಸಾಯುವುದಿಲ್ಲವೇ? ಎಂದು ಆಕ್ರೋಶ ಹೊರ ಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮವನ್ನು ವಿರೋಧಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಿಎಂ ಡಿಕೆ ಶಿವಕುಮಾರ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್ ಮತ್ತು ಪವನ್ ಖೇರಾ ಸೇರಿದಂತೆ ಹಲವಾರು ಪ್ರಮುಖ ನಾಯಕರು ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸಿದರು. ಅಲ್ಲದೇ ಘೋಷಣೆಗಳನ್ನು ಕೂಗಿ ರಾಜೀನಾಮೆಗೆ ಒತ್ತಾಯಿಸಿದರು.



