
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ- ಗೋಕಾಕ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಕೊಣ್ಣೂರಿನಲ್ಲಿರುವ ಸರ್ಕಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ ೭೩ ರಲ್ಲಿ ಸ್ಥಾಪಿಸಲಾಗಿರುವ ಸಖಿ ಮತಗಟ್ಟೆಯನ್ನು ವಿಶೇಷವಾಗಿ ಅಲಂಕೃತಗೊಳಿಸಲಾಗಿದೆ.

ಅದೇ ರೀತಿ ಕುಡಿಯುವ ನೀರು, ಶೌಚಾಲಯ, ವಿಕಲಚೇತನರಿಗೆ ಗಾಲಿಕುರ್ಚಿ ಸೌಲಭ್ಯಗಳನ್ನು ಒದಗಿಸಲಾಗಿದೆ.
ಸಖಿ ಮತಗಟ್ಟೆಗಳಲ್ಲಿ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯಾಗಿ ಮಹಿಳೆಯರೇ ಕಾರ್ಯನಿರ್ವಹಿಸಲಿರುವುದು ವಿಶೇಷವಾಗಿದೆ.
ಜಿಲ್ಲೆಯಲ್ಲಿ ಉಪ ಚುನಾವಣೆ ನಡೆಯುತ್ತಿರುವ ಮೂರು ಮತ ಕ್ಷೇತ್ರದಲ್ಲಿ ತಲಾ ಒಂದೊಂದು ಸಖಿ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ