Latest

ಅದ್ಧೂರಿಯಾಗಿ ನೆರವೇರಿದ ಪ್ರಭಾಸ್ ಅಭಿನಯದ ಸಲಾರ್ ಚಿತ್ರದ ಮುಹೂರ್ತ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಬಾಹುಬಲಿ ಖ್ಯಾತಿಯ ಪ್ರಭಾಸ್‌ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಸಲಾರ್’ಚಿತ್ರದ ಮುಹೂರ್ತ ಹೈದರಾಬಾದ್ ನಲ್ಲಿ ನೆರವೇರಿತು. ಹೊಂಬಾಳೆ ಫಿಲ್ಮ್ಸ್‌ನ ವಿಜಯ್‌ ಕಿರಗಂದೂರು ಸಲಾರ್ ಗೆ ಬಂಡವಾಳ ಹೂಡುತ್ತಿದ್ದಾರೆ.

‘ಸಲಾರ್‌’ ಚಿತ್ರತಂಡದ ಸಂಭ್ರಮದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾಗವಹಿಸಿದ್ದರು. ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮುಹೂರ್ತದ ಪೂಜೆ ನೆರವೇರಿತು. ಚಿತ್ರದ ಹೀರೋ ಪ್ರಭಾಸ್‌, ತೆಲುಗು ಮತ್ತು ಕನ್ನಡ ಚಿತ್ರರಂಗಗಳ ಅನೇಕ ಗಣ್ಯರು, ತಾರೆಯರು ಪಾಲ್ಗೊಂಡು ಶುಭ ಹಾರೈಸಿದರು.

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾವನ್ನು ಕನ್ನಡಿಗರೇ ನಿರ್ದೇಶಿಸಿ, ನಿರ್ಮಾಣ ಮಾಡುತ್ತಿರುವುದು ಖುಷಿಯ ವಿಷಯ. ಹೈದರಾಬಾದ್‌ನಲ್ಲಿ ನೆರವೇರಿದ ‘ಸಲಾರ್’ ಮುಹೂರ್ತ ಸಮಾರಂಭದಲ್ಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಭಾಗಿಯಾಗಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button