Karnataka News

*ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ: ಐವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿಯದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ನಲೋಗಿ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಹನ್ನೊಂದು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬಗಲಕೋಟೆ ಮೂಲದವರು ಎಂದು ತಿಳಿದುಬಂದಿದೆ.

Home add -Advt

ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. ವಾಜೀದ್, ಮೆಹಬೂಬಿ, ಪ್ರಿಯಾಂಕಾ ಮೆಹಬೂಬಿ ಸೇರಿ ಐವರು ಮೃತಪಟ್ಟಿದ್ದಾರೆ. ನೆಲೋಗಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button