
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಂದು ಕೊಲೆ ಬೆದರಿಕೆ ಹಾಕಲಾಗಿದೆ. ಪ್ರಕರಣ ಸಂಬಂಧ ಆರೋಪಿ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಸಲ್ಮಾನ್ ಖಾನ್ ಅವರ ಕಾರಿನಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ವಾಟ್ಸಾಪ್ ಮೂಲಕ ಸಂದೇಶ ರವಾನಿಸಿದ್ದ ಎಂದು ತಿಳಿದುಬಂದಿದೆ. ಅಲರ್ಟ್ ಆದ ಮುಂಬೈ ಪೊಲೀಸರು ಬೆದರಿಕೆ ಸಂದೇಶ್ ಆಧರಿಸಿ 26 ವರ್ಷದ ಯುವಕನೊಬ್ಬನನ್ನು ಬಂಧಿಸಿದ್ದಾರೆ.
ವಿಚಾರಣೆ ವೇಳೆ ಯುವಕ ಮಾನಸಿಕ ಅಸ್ವಸ್ಥ ಎಂದು ಆತನ ಪೋಷಕರು ಹೇಳಿದ್ದಾರೆ ಎಂದು ತಿಳಿದುಬಂದಿದೆ.