
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಅಬ್ಬರದ ನಡುವೆ ಬಿಸಿಲ ಝಳವೂ ಹೆಚ್ಚಾಗಿದೆ. ಕೆಲ ಜಿಲ್ಲೆಗಳಲ್ಲಿ ದಿನದಿಮ್ದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಇದರಿಂದಾಗಿ ಮಕ್ಕಳು, ನವಜಾತಶಿಶುಗಳು, ಹಿರಿಯರು ಹೈರಾಣಾಗುತ್ತಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಪರಿಣಾಮ ನವಜಾತ ಶಿಶುಗಳಲ್ಲಿ ಕಿಡ್ನಿ ಬಾವು, ಮೂತ್ರ ವಿಸರ್ಜನೆ ಸಮಸ್ಯೆ, ಸೆಕೆ ಗುಳ್ಳೆ ಸೇರಿದಂತೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ.
ಜಿಲ್ಲೆಯ ತಾಯಿ ಮಕ್ಕಳ ಆಸ್ಪತ್ರೆಗೆ ದಿನದಿಂದ ದಿನಕ್ಕೆ ಬಾಣಂತಿಯರು, ನವಜಾತ ಶಿಶುಗಳು ದಾಖಲಾಗುತ್ತಿದ್ದಾರೆ. ತಾಪಮಾನ ಹೆಚ್ಚಳದಿಂದಾಗಿ ಶಿಶುಗಳು ಬೇರೆ ರೀತಿಯ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚು. ಹಾಗಾಗಿ ಮುಂಜಾಗೃತೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಮಕ್ಕಳಿಗೆ ತೆಳ್ಳನೆಯ ಬಟ್ಟೆ ತೊಡಿಸಿ, ತಾಯಂದಿರು ಸರಿಯಾದ ಸಮಯಕ್ಕೆ ಮಕ್ಕಳಿಗೆ ಎದೆ ಹಾಲುಣಿಸಿ ಎಂದು ಮಕ್ಕಳ ತಜ್ಞರು ಸೂಚಿಸಿದ್ದಾರೆ.