Kannada NewsKarnataka NewsLatestUncategorized

*ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ, ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ನಿವಾಸದಲ್ಲಿ ಇಂದು ಸಂಜೆ ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ ಅವರ ಬೆನ್ನು ಮೂಳೆಗೆ ಪೆಟ್ಟಾಗಿದೆ. ಈ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ತುಮಕೂರಿನ ಗುಬ್ಬಿ ಮೂಲದ ತಿಮ್ಮಕ್ಕ ಪರಿಸರದ ಮೇಲಿನ ಅಪಾರ ಪ್ರೀತಿಯಿಂದ ಗಿಡಗಳನ್ನು ನೆಟ್ಟು ಬೆಳೆಸಿದ್ದು, ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತಿ ಪಡೆದಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button