*ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ, ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ನಿವಾಸದಲ್ಲಿ ಇಂದು ಸಂಜೆ ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ ಅವರ ಬೆನ್ನು ಮೂಳೆಗೆ ಪೆಟ್ಟಾಗಿದೆ. ಈ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ತುಮಕೂರಿನ ಗುಬ್ಬಿ ಮೂಲದ ತಿಮ್ಮಕ್ಕ ಪರಿಸರದ ಮೇಲಿನ ಅಪಾರ ಪ್ರೀತಿಯಿಂದ ಗಿಡಗಳನ್ನು ನೆಟ್ಟು ಬೆಳೆಸಿದ್ದು, ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತಿ ಪಡೆದಿದ್ದಾರೆ. *ಬಾಲಕರನ್ನು ಕಟ್ಟಿಹಾಕಿ ಮೂತ್ರ … Continue reading *ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು*