Karnataka NewsLatestPolitics

*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದ ಸಮರ್ಥ ಶಾಮನೂರು*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ಸಲ್ಲಿಸಿದರು.

Home add -Advt


ಲಕ್ಷ್ಮೀ ಹೆಬ್ಬಾಳಕರ್ ಅವರು ದಾವಣಗೆರೆ ಉಪಚುನಾವಣೆ ವೇಳೆ ಅಲ್ಲಿಯೇ ವಾಸ್ತವ್ಯ ಹೂಡಿ ಪ್ರಚಾರ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಕೊಳ್ಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಸಮರ್ಥ ಅವರು ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ಉಪಸ್ಥಿತರಿದ್ದರು.

Related Articles

Back to top button