Karnataka NewsLatestPolitics

*ವಿಧಾನ ಸಭೆಯ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ವಿಧಾನ ಸಭೆಯ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆಯಾಗಿದೆ ಎಂದು ವಿಧಾನಸಭೆಯ ಕಛೇರಿ ತಿಳಿಸಿದೆ.

ಬಾಗಲಕೋಟೆ ವಿಧಾನ ಸಭಾ ಶಾಸಕರಾದ ಹೆಚ್.ವೈ. ಮೇಟಿ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶಾಮನೂರು ಶಿವಶಂಕರಪ್ಪ ಇವರುಗಳ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಾಲಗಕೋಟೆ ಹಾಗೂ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ರವರುಗಳು ಆಯ್ಕೆಯಾಗಿದ್ದಾರೆ. ಇವರು ವಿಧಾನಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ದಿನಾಂಕ:11.05.2026ರ ಬೆಳಗ್ಗೆ 10.00 ಗಂಟೆಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ:334ರಲ್ಲಿ ನಿಗದಿಪಡಿಸಲಾಗಿತ್ತು. ಆದರೆ ಪ್ರಮಾಣ ವಚನ ಕಾರ್ಯಕ್ರಮವನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಅವರ ನಿಧನದ ಕಾರಣ ಮುಂದೂಡಲಾಗಿದೆ ಎಂದು ವಿಧಾನ ಸಭೆಯ ಕಛೇರಿ ಪ್ರಕಟಣೆ ತಿಳಿಸಿದೆ.

Home add -Advt

Related Articles

Back to top button