*ದಳಪತಿಗಳಿಗೆ ಮತ್ತೊಂದು ಶಾಕ್; ಶಾಸಕ ಎಸ್.ಆರ್.ಶ್ರೀನಿವಾಸ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ರಾಜೀನಾಮೆ ನೀಡಿದ್ದು, ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಇದೀಗ ದಳಪತಿಗಳಿಗೆ ಮತ್ತೊಂದು ಶಾಕ್ ಆಗಿದೆ. ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್ ಕಚೇರಿಗೆ ತೆರಳಿ ರಾಅಜೀನಾಮೆ ಪತ್ರ ಸಲ್ಲಿಸಿದರು.

Home add -Advt

ಇದಕ್ಕೂ ಮುನ್ನ ಮಾತನಾಡಿದ ಎಸ್.ಆರ್.ಶ್ರೀನಿವಾಸ್, ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದೇನೆ. ಗುಬ್ಬಿ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನನ್ನನ್ನು ಮಗನಂತೆ ನೋಡಿಕೊಂಡರು. ಕುಮಾರಸ್ವಾಮಿ ನಾನು ಅಣ್ಣ-ತಮ್ಮಂದಿರಂತೆ ಇದ್ದೆವು. ಆದರೆ ಕಳೆದ ಒಂದು ವರ್ಷದ ಹಿಂದೆ ಯಾರೋ ಹುಳಿ ಹಿಂಡಿದರು. ಇಂದು ಜೆಡಿಎಸ್ ಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.

Related Articles

Back to top button