Kannada NewsKarnataka NewsLatest

*ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದೆ.

ಎಐ ವಿಡಿಯೋ ಸೃಷ್ಟಿಸಿ ಗಲಭೆಗೆ ಪ್ರಚೋದನೆ, ತಪ್ಪು ಮಾಹಿತಿ ನೀಡಿ ಧರ್ಮಸ್ಥಳದ ಬಗ್ಗೆ ಪ್ರಚೋದನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು.

ಬಂಧನ ಭೀತಿಯಲ್ಲಿದ್ದ ಸಮೀರ್ ಎಂಡಿ.ಆಗಸ್ಟ್ 19ರಂದು ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಸಮೀರ್ ಎಂ.ಡಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button