
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿ, ಎಐ ವಿಡಿಯೋ ಅಪ್ ಲೋಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ ನಿವಾಸದ ಮೇಲೆ ಪೊಲೀಸರು ದಾಲಿ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೊಲೀಸರು ಸಮೀರ್ ಎಂಡಿಯ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿ ಪರುಶೀಲನೆ ನಡೆಸಿದ್ದಾರೆ.
ಯೂಟ್ಯೂಬರ್ ಸಮೀರ್ ಎಂಡಿ ಕೆಲ ದಿನಗಳ್ ಅಹಿಂದೆ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದಾಗ, ಆತನಿಗೆ ಲ್ಯಾಪ್ ಟಾಪ್ ಠಾಣೆಗೆ ತಂದು ಒಪ್ಪಿಸುವಂತೆ ಸೂಚಿಸಲಾಗಿತ್ತು. ಆದರೆ ಆತ ಲ್ಯಾಪ್ ಟಾಪ್, ಕಂಪ್ಯೂಟರ್ನ್ ನ್ನು ಒಪ್ಪಿಸಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಹುಳ್ಳಹಳ್ಳಿಯಲ್ಲಿರುವ ಆತನ ಬಾಡಿಗೆ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.