
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಪಘಾತಕ್ಕೀಡಾಗಿರುವ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಸಂಚಾರಿ ವಿಜಯ್ ಅವರ ಸ್ಥಿತಿ ತೀವ್ರ ಗಂಭೀರವಾಗಿದ್ದು, ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಸಹೋದರ ಸಿದ್ದೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯ ಹಂತ ತಲುಪಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ವೈದ್ಯರು ಹೇಳುವ ಪ್ರಕಾರ ಅವರು ಬದುಕಿ ಬರುವ ಸಾಧ್ಯತೆ ಕಡಿಮೆ. ಕ್ಷಣ ಕ್ಷಣಕ್ಕೂ ಅವರ ಸ್ಥಿತಿ ಚಿಂತಾಜನಕವಾಗುತ್ತಿದೆ. ಆದರೂ ಅವರು ಆರೋಗ್ಯವಾಗಿ ಮತ್ತೆ ನಮ್ಮೊಂದಿಗೆ ಬರಲಿ ಎಂಬುದೇ ಪ್ರಾರ್ಥನೆ ಎಂದು ಕಣ್ಣೀರಿಟ್ಟಿದ್ದಾರೆ.
ವಿಜಯ್ ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ, ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದರು.