Film & EntertainmentKannada NewsKarnataka NewsLatest

*ಹಿರಿಯ ಹಾಸ್ಯ ನಟ ಉಮೇಶ್ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಉಮೇಶ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ನಟ ಉಮೇಶ್ ಮನೆಯಲ್ಲಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು ಮೂಲದವರಾದ ಉಮೇಶ್ ಕನ್ನಡ ಚಲನಚಿತ್ರರಂಗದಲ್ಲಿ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ತಮ್ಮದೇ ಆದ ವಿಶಿಷ್ಠ ಶೈಲಿಯ ಹಾವ-ಭಾವ, ಸಂಭಾಷಣೆಗಳ ಮೂಲಕ ಹಾಸ್ಯ ಕಲಾವಿದರಾಗಿ ಜನಮೆಚ್ಚುಗೆ ಪಡೆದಿದ್ದಾರೆ. ಗೋಲ್ ಮಾಲ್ ರಾಧಾಕೃಷ್ಣ ಚಿತ್ರದ ಸೀತಾಪತಿ ಪಾತ್ರ ಇಂದಿಗೂ ಜನ ಮಾನಸದಲ್ಲಿ ಅಚ್ಚಳಿಯದೇ ಉಳಿದಿದೆ.

Home add -Advt

Related Articles

Back to top button