
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಸ್ನೇಹಿತನೊಂದಿಗೆ ತೆರಳುತ್ತಿದ್ದಗ ಬೈಕ್ ಅಪಘಾತಕ್ಕೀಡಾಗಿದ್ದ ನಟ ಸಂಚಾರಿ ವಿಜಯ್, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ನಿನ್ನೆ ರಾತ್ರಿಯೇ ರಸ್ತೆ ಅಪಘಾತಕ್ಕೀಡಾಗಿರುವ ನಟ ಸಂಚಾರಿ ವಿಜಯ್ ಗೆ ಮೆದುಳಿನ ಬಲಭಾಗದಲ್ಲಿ ತೀವ್ರ ರಕ್ತಸ್ರಾವವಾಗಿದೆ. ಅಲ್ಲದೇ ಅವರ ತೊಡೆಯ ಭಾಗ ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲೇ ಅವರಸ್ಥಿತಿ ಗಂಭೀರವಾಗಿತ್ತು. ತಕ್ಷಣ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಇನ್ನೂ ಪ್ರಜ್ನಾಹೀನ ಸ್ಥಿತಿಯಲ್ಲಿದ್ದು, ಐಸಿಯುನಲ್ಲಿರುವುದಾಗಿ ವೈದ್ಯ ಡಾ.ಅನಿಲ್ ಕುಮಾರ್ ತಿಳಿಸಿದ್ದಾರೆ.
’ನಾನು ಅವನಲ್ಲ ಅವಳು’ ಚಿತ್ರದ ಅಭಿನಯಕ್ಕಾಗಿ ಸಂಚಾರಿ ವಿಜಯ್ ಗೆ ಉತ್ತಮ ನಟ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದ್ದರು. ರಂಗಪ್ಪ ಹೋಗ್ಬಿಟ್ಟ, ಒಗ್ಗರಣೆ ಸೇರಿದಂತೆ ಹಲವು ಚಿತ್ರಗಳ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದರು.