Belagavi NewsBelgaum NewsKannada NewsKarnataka NewsPolitics

*ಚಿತ್ರೀಕರಣದ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗದ ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆದಿತ್ತು. ಈ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಿರ್ದೇಶಕ ಸಂಗೀತ್ ಸಾಗರ್ ಮೃತ ದುರ್ದೈವಿ. ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಕೊಪ್ಪದ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿರ್ದೇಶಕ ಸಂಗೀತ್ ಸಾಗರ್ ಕೊನೆಯುಸಿರೆಳೆದಿದ್ದಾರೆ. ಪಾತ್ರದಾರಿ ಎಂಬ ಸಿನಿಮಾದ ಚಿತ್ರೀಕರಣಕ್ಕಾಗಿ ಕಳೆದ 20 ದಿನಗಳಿಂದ ಹರಿಹರಪುರ, ತೀರ್ಥಹಳ್ಳಿಗೆ ಆಗಮಿಸಿ ಶೂಟಿಂಗ್ ಮಾಡುತ್ತಿದ್ದರು.

ಸ್ನೇಹಿತ, ಕೋಲ್ಮಿಂಚು, ಅವನಂದ್ರೆ ಅವನೇ ಮುಂತಾದ ಸಿನಿಮಾಗಳ ಮೂಲಕ ಅವರು ಗುರುತಿಸಿಕೊಂಡಿದ್ದರು. 

Home add -Advt

ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.

Related Articles

Back to top button