*ಚಿತ್ರೀಕರಣದ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗದ ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆದಿತ್ತು. ಈ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿರ್ದೇಶಕ ಸಂಗೀತ್ ಸಾಗರ್ ಮೃತ ದುರ್ದೈವಿ. ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಕೊಪ್ಪದ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿರ್ದೇಶಕ ಸಂಗೀತ್ ಸಾಗರ್ ಕೊನೆಯುಸಿರೆಳೆದಿದ್ದಾರೆ. ಪಾತ್ರದಾರಿ ಎಂಬ ಸಿನಿಮಾದ ಚಿತ್ರೀಕರಣಕ್ಕಾಗಿ ಕಳೆದ 20 ದಿನಗಳಿಂದ … Continue reading *ಚಿತ್ರೀಕರಣದ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಹೃದಯಾಘಾತದಿಂದ ಸಾವು*