ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಆ ದಿನಗಳು ಚೇತನ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ‘ಆ ದಿನಗಳು’ ಚಿತ್ರದ ಖ್ಯಾತಿಯ ನಟ ಚೇತನ್ ತಮ್ಮ ಬಹುಕಾಲದ ಗೆಳತಿ ಮೇಘಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಚೇತನ್, ಅನಾಥ ಮಕ್ಕಳು ಹಾಗೂ ವೃದ್ಧಾಶ್ರಮದ ಹಿರಿಯರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವುದು ವಿಶೇಷ.

ಈ ಬಗ್ಗೆ ಸ್ವತ: ಚೇತನ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದು, ಫೆ.2 ರಂದು ವಲ್ಲಬ್ ನಿಕೇತನ್ ಆಶ್ರಮದಲ್ಲಿ ಮೇಘಾ ಅವರೊಂದಿಗೆ ಸರಳವಾಗಿ ವಿವಾಹವಾಗಲಿರುವುದಾಗಿ ತಿಳಿಸಿದ್ದಾರೆ.

ಚೇತನ್ ಅವರ ಭಾವಿ ಪತ್ನಿ ಮೇಘಾ ಅಸ್ಸಾಂ ಮೂಲದವರಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿಯೇ ವಾಸವಾಗಿದ್ದಾರೆ. ಅಲ್ಲದೇ ಮೇಘಾ ಕೂಡ ಚೇತನ್ ಅವರಂತೆಯೇ ಸಾಮಾಜಿಕ ಕಾರ್ಯಗಳಲ್ಲಿ ಕೂಡ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಟ ಚೇತನ್ ಹಾಗೂ ಮೇಘಾ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಈಗ ಕುಟುಂಬದವರ ಒಪ್ಪಿಗೆ ಮೇರೆಗೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಯಾವುದೇ ಆಡಂಬರ, ಅದ್ದೂರಿತನವಿಲ್ಲದೇ ತುಂಬಾ ಸರಳವಾಗಿ ವಿವಾಹವಾಗುತ್ತಿದ್ದು, ವಿವಾಹ ಸಮಾರಂಭದಲ್ಲಿ ವಚನ ಗಾಯನ, ಸೂಫಿ ಗಾಯನ, ಕೊರಗ ನೃತ್ಯ, ಲಂಬಾಣಿ ನೃತ್ಯ, ಸಿದ್ಧಿ ನೃತ್ಯ ಮತ್ತು ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button