ಹಿರಿಯ ನಟ ದ್ವಾರಕೀಶ್ ಮನೆಗೆ ನುಗ್ಗಿ ಗಲಾಟೆ ಮಾಡಿದ ಫೈನಾನ್ಶಿಯರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಯುಷ್ಮಾನ್ ಭವ ಚಿತ್ರ ನಿರ್ಮಾಣಕ್ಕಾಗಿ ಪಡೆದಿದ್ದ ಹಣವನ್ನು ವಾಪಸ್ ನೀಡಿಲ್ಲ ಎಂಬ ಕಾರಣಕ್ಕೆ ಸ್ಯಾಂಡಲ್‍ವುಡ್ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ಅವರ ಮನೆಗೆ ನುಗ್ಗಿ ಫೈನಾನ್ಶಿಯರ್ ರಮೇಶ್ ಹಾಗೂ ನಿರ್ಮಾಪಕ ಜಯಣ್ಣ ಗಲಾಟೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ದ್ವಾರಕೀಶ್ ಅವರು ಆಯುಷ್ಮಾನ್ ಭವ ಚಿತ್ರದ ನಿರ್ಮಾಪಕರಾಗಿದ್ದರು. ಹೀಗಾಗಿ ಅವರು ಫೈನಾಶಿಯರ್ ರಮೇಶ್ ಅವರಿಂದ ಹಣ ಪಡೆದಿದ್ದರು. ಆದರೆ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿರಲಿಲ್ಲ. ಈ ವೇಳೆ ಫೈನಾನ್ಸ್ ಮಾಡಿದ್ದ ರಮೇಶ್ ಹಣವನ್ನು ವಾಪಸ್ ಕೊಡುವಂತೆ ದುಂಬಾಲು ಬಿದ್ದಿದ್ದರು. ಶುಕ್ರವಾರ ಮಧ್ಯಾಹ್ನ ಏಕಾಏಕಿ ರಮೇಶ್ ಹಾಗೂ ಜಯಣ್ಣ, ದ್ವಾರಕೀಶ್ ಮನೆಗೆ ಹೋಗಿ ಹಣವನ್ನು ಕೇಳಿದ್ದರು. ಆಗ ದ್ವಾರಕೀಶ್ ಅವರು, ಸ್ವಲ್ಪ ಕಾಲಾವಕಾಶ ಕೊಡುವಂತೆ ಮನವಿ ಮಾಡಿದ್ದಾರೆ. ಆದರೆ ಹಣವನ್ನು ಬಿಡುವುದಕ್ಕೆ ಸಾಧ್ಯವಿಲ್ಲ. ನೀವು ಹೇಳಿದ ಗಡುವು ಮುಗಿದಿದೆ. ಗಡುವು ಮುಗಿದ ಬಳಿಕವೂ ಹಣವನ್ನು ಬಿಡುವುದಕ್ಕೆ ಸಾಧ್ಯಾವಿಲ್ಲ ಎಂದು ಹೇಳಿ ಧಮ್ಕಿ ಹಾಕಿದ್ದಾರೆ.
.
ರಮೇಶ್ ದ್ವಾರಕೀಶ್ ಅವರ ಮನೆಯಲ್ಲಿ ಗಲಾಟೆ ಆರಂಭಿಸಿದ್ದರಿದ ಕೋಪಗೊಂಡ ದ್ವಾರಕೀಶ್ ಅವರು, ಒಂದೂವರೆ ವರ್ಷ ಆದರೂ ನಿನಗೆ ನಾನು ಹಣ ಕೊಡೋದಿಲ್ಲ ಅಂತ ಹೇಳಿದ್ದಾರೆ. ಈ ವಿಚಾರಕ್ಕೆ ಇಬ್ಬರ ಮಧ್ಯ ಗಲಾಟೆಯಾಗಿದೆ.

Home add -Advt

ಘಟನೆ ಬೆನ್ನಲ್ಲೇ ದ್ವಾರಕೀಶ್ ಎಚ್‍ಎಸ್‍ಆರ್ ಲೇಔಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಮಾತನಾಡಿದ ದ್ವಾರಕೀಶ್ ಅವರ ಪುತ್ರ ಯೋಗೀಶ್, ನಾನು ಮನೆಯಲ್ಲಿ ಇಲ್ಲದೆ ಇರುವಾಗ ರಮೇಶ್ ಹಾಗೂ ಜಯಣ್ಣ ಮನೆಗೆ ಬಂದು ಗಲಾಟೆ ಮಾಡಿದ್ದಾರೆ. ವ್ಯವಹಾರದಲ್ಲಿ ಕಾನೂನು ಪ್ರಕಾರ ನಡೆದುಕೊಳ್ಳದೇ ಮನೆಗೆ ನುಗ್ಗಿದ್ದು ಸರಿಯಲ್ಲ. ಘಟನೆಯಿಂದಾಗಿ ತಂದೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Related Articles

Back to top button