Latest

ಹೆಸರಾಂತ ಹಾಸ್ಯ ನಟ ಮೋಹನ್ ಜೂನೇಜ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಹಾಸ್ಯ ಕಲಾವಿದ ಮೋಹನ್ ಜೂನೇಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ಜೂನೇಜ ಬೆಂಗಳೂರಿನ ಹೆಸರಘಟ್ಟ ಬಳಿಯ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಪತ್ನಿ ಕುಸುಮಾ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Home add -Advt

ವಠಾರಾ ಧಾರಾವಾಹಿಯಿಂದ ಜನಪ್ರಿಯತೆ ಪಡೆದುಕೊಂಡಿದ್ದ ಮೋಹನ್ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ನಟನಾಗಿ, ಹಾಸ್ಯ ನಟನಾಗಿ ಅಭಿನಯಿಸಿದ್ದರು. ಯಶ್ ಅಭಿನಯದ ಕೆಜಿಎಫ್ ಭಾಗ ಒಂದು, ಎರಡರಲ್ಲಿಯೂ ಪೋಷಕ ನಟನಾಗಿ ಬಣ್ಣಹಚ್ಚಿದ್ದರು.
ಪಿಎಸ್ ಐ ಅಕ್ರಮ; 11 ಪೊಲೀಸ್ ಸಿಬ್ಬಂದಿಗಳು ಅಮಾನತು

Related Articles

Back to top button