Latest

ಹಿರಿಯ ನಟ ಸತ್ಯಜಿತ್ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅನಾರೋಗ್ಯಕ್ಕೀಡಾಗಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸತ್ಯಜಿತ್ ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಂದೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.

Home add -Advt

ಸತ್ಯಜಿತ್ ಗ್ಯಾಂಗ್ರೀನ್ ನಿಂದಾಗಿ ನಾಲ್ಕು ವರ್ಷಗಳ ಹಿಂದೆ ಒಂದು ಕಾಲನ್ನು ಕಳೆದುಕೊಂಡಿದ್ದರು. ಇದೀಗ ಹಾರ್ಟ್ ಸ್ಟ್ರೋಕ್ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಮೂರು ದಿನಗಳಿಂದ ಅವರ ಆರೋಗ್ಯ ತುಂಬಾ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ವಾಹನಕ್ಕೆ ಬೆಂಕಿ; ಲಖಿಂಪುರ ಇನ್ನಷ್ಟು ಉದ್ವಿಗ್ನ

ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ?

Related Articles

Back to top button