Latest

ಚಿತ್ರರಂಗಕ್ಕೆ ಬಿಗ್ ಶಾಕ್; ಹಿರಿಯ ನಟ ಸತ್ಯಜಿತ್ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ. ಹಿರಿಯ ನಟ ಸತ್ಯಜಿತ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.

ಅನಾರೋಗ್ಯ ಹಿನ್ನೆಲೆಯಲ್ಲಿ ಕೆಲದಿನಗಳಿಂದ ಸತ್ಯಜಿತ್ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡ ರಾತ್ರಿ 2 ಗಂಟೆ ವೇಳೆಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಕಳೆದ ನಾಲ್ಕು ವರ್ಷಗಳಿಂದ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿದ್ದ ಸತ್ಯಜಿತ್ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

ಕನ್ನಡದ ಅಭಿ, ಅರಸು, ಅಪ್ಪು, ಆಪ್ತಮಿತ್ರ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದ ಸತ್ಯಜಿತ್, ವಿಲನ್ ಪಾತ್ರಗಳಲ್ಲಿ ಖಡಕ್ ಅಭಿನಯದಿಂದ ಹೆಸರಾಗಿದ್ದರು.

Related Articles

Back to top button