Latest

*ಕನ್ನಡ ಚಿತ್ರರಂಗದ ಯುವನಟ ಧನುಷ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಧನುಷ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಸಂಪಿಗೆಹಳ್ಳಿ, ಕೊಟ್ಳಲ್ಲಪ್ಪೋ ಕೈ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಧನುಷ್ ಸಿನಿಮಾ ಚಿತ್ರೀಕರಣಕ್ಕಾಗಿ ಲಡಾಖ್ ಗೆ ತೆರಳಿದ್ದರು. ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ತೀವ್ರ ಅನಾರೋಗ್ಯಕ್ಕೀಡಾಗಿದ್ದರು ಎನ್ನಲಾಗಿದೆ.

Home add -Advt

ಅವರನ್ನು ಬೆಂಗಳೂರಿಗೆ ವಾಪಸ್ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಕೋಡಿಹಾಳ ಗ್ರಾಮದವರಾಗಿದ್ದ ಧನುಷ್ ಮೂಲ ಹೆಸರು ಶ್ರೀಮುತ್ತುರಾಜ್. ಸಿನಿಮಾಗಾಗಿ ತಮ್ಮ ಹೆಸರನ್ನು ಧನುಷ್ ಎಂದು ಬದಲಿಸಿಕೊಂಡಿದ್ದರು. ಸ್ನೇಹಿತ, ಶಿವರಾಜ್ ಕುಮಾರ್ ಅಭಿನಯದ ಲೀಡರ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ಧನುಷ್ ಅಭಿನಯಿಸಿದ್ದರು.

 

ಬಾಗಲಕೋಟೆ ಜಿಲ್ಲೆಯ ಕೋಡಿಹಾಳ ಗ್ರಾಮದ ದಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಉದಯೋನ್ಮುಖ ನಟನ ಅಕಾಲಿಕ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

*ನ್ಯಾಯಬೇಕು ಮೋದಿ… ಎಂದು ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ*

https://pragati.taskdun.com/siddaramaiahtweetpm-modi/

 

Related Articles

Back to top button