
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟ ಲಕ್ಷ್ಮಣ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಸ್ಯಾಂಡಲ್ ವುಡ್ ನಲ್ಲಿ ಖಳನಟನ ಪಾತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಂದಿದ್ದ ಲಕ್ಷ್ಮಣ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ನಿನ್ನೆ ರಾತ್ರಿ ಲಕ್ಷ್ಮಣ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ಬೆಂಗಳೂರಿನ ನಾಗರಬಾವಿ ಬಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಲಕ್ಷ್ಮಣ ಅವರು ಡಾ.ರಾಜ್ ಕುಮಾರ್, ವಿಷ್ಣುವರ್ಷನ್, ಅಂಬರೀಶ್, ಶಂಕರ್ ನಾಗ್, ಪ್ರಭಾಕರ್ ಸೇರಿದಂತೆ ಹಲವು ದಿಗ್ಗಜ ನಟರೊಂದಿಗೆ ಅಭಿನಯಿಸಿದ್ದರು. ಪೊಲೀಸ್ ಅಧಿಕಾರಿ ಹಾಗೂ ಖಳನಟನ ಪಾತ್ರದಲ್ಲಿ ಮಿಂಚಿದ್ದರು.
ಸೂರ್ಯವಂಶ, ಸಾಂಗ್ಲಿಯಾನ,ಒಲವಿನ ಉಡುಗೊರೆ,ಕರುಳಿನ ಕುಡಿ, ಯಜಮಾನ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಿರಿಯ ನಟನ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದೆ.
*ಬೆಂಗಳೂರಿನಲ್ಲಿ ಪಾಕಿಸ್ತಾನ ಯುವತಿ ಬಂಧನ*
https://pragati.taskdun.com/19-years-old-pakistani-girlarrestedbangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ