Film & EntertainmentKannada NewsKarnataka News

*ಹಿರಿಯ ನಟಿ ಲಲಿತಮ್ಮ ಇನ್ನಿಲ್ಲ*

. ಪ್ರಗತಿವಾಹಿನಿ ಸುದ್ದಿ: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರ ಸುಂಟರ ಗಾಳಿ ಸಿನಿಮಾದಲ್ಲಿ ಅಭಿನಯಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲಲಿತಮ್ಮ ಅನಾರೋಗ್ಯದಿಂದ ವಿಧಿವಶರಾಗಿದದರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ರಂಗಭೂಮಿ ಕಲಾವಿದೆ ಲಲಿತಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಸುಂಟರಗಾಳಿ ಸಿನಿಮಾದಲ್ಲಿ ಲೇಡಿ ವಿಲನ್ ಆಗಿ ಅಭಿನಯಿಸಿದ್ದ ಲಲಿತಮ್ಮ ಹಲವು ಸಿನಿಮಾ, ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. ಅಮ್ಮನ ಮಡಿಲು ಟ್ರಸ್ಟ್ ನಲ್ಲಿ ಆಶ್ರಯ ಪಡೆದಿದ್ದ ನಟಿ ಲಲಿತಮ್ಮ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

35 ವರ್ಷಗಳ ಕಾಲ ರಂಗಭೂಮಿಯಲ್ಲಿ ಕಲಾ ಸೇವೆ ಸಲ್ಲಿಸಿದ್ದರು. ಬಳಿಕ ಕಿರುತೆರೆ ಹಾಗೂ ಸಿನಿಮಾರಂಗದಲ್ಲೂ ಗುರುತಿಸಿಕೊಂಡಿದ್ದರು. ‘ರಂಗೋಲಿ’, ‘ಮಾಂಗಲ್ಯ’, ‘ಮಹಾಮಾಯಿ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಹಾಗೂ ‘ಸುಂಟರಗಾಳಿ’, ‘ಜಾಕಿ’, ‘ವಜ್ರಕಾಯ’, ‘ಜಂಗ್ಲಿ ಕಿತ್ತೂರು’, ‘ಪುತ್ರ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ವಿಶೇಷವಾಗಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ‘ಸುಂಟರಗಾಳಿ’ ಸಿನಿಮಾದಲ್ಲಿ ಅವರು ಮಾಡಿದ್ದ ‘ಸಾರಾಯಿ ಶಾರದೆ’ ಪಾತ್ರ ಪ್ರೇಕ್ಷಕರ ಗಮನ ಸೆಳೆದಿತ್ತು. ಹಿರಿಯ ನಟಿಯ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button