Latest

*ನಟ ಚೇತನ್ ಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಹಿಂದುತ್ವದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಹಿನ್ನಲೆಯಲ್ಲಿ ಚೇತನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಚೇತನ್ ಅವರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಚೇತನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಚೇತನ್ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲೆಗೆ ಶಿಫ್ಟ್ ಮಾಡಿದ್ದಾರೆ.

ಹಿಂದುತ್ವದ ಬಗ್ಗೆ ವಿವಾದಾತ್ಮಕವಾಗಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿ ಪ್ರಕರಣ ದಾಖಲಾಗಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button