ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ನಟ ಚೇತನ್ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿಂದುತ್ವದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಹಿನ್ನಲೆಯಲ್ಲಿ ಚೇತನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಚೇತನ್ ನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿ ಪ್ರಕರಣ ದಾಖಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ