Film & EntertainmentKannada NewsKarnataka NewsLatest

*ಸ್ಯಾಂಡಲ್ ವುಡ್ ನ ಮತ್ತೋರ್ವ ನಟಿಗೆ ಅಶ್ಲೀಲ ಕಮೆಂಟ್: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿ, ಆರೋಪಿಗಳು ಬಂಧನಕ್ಕೊಳಗಾದ ಘಟನೆ ನಡೆದಿದ್ದರೂ ಈ ಪ್ರಕರಣದಿಂದ ಬುದ್ಧಿ ಕಲಿಯದ ಕಿಡಿಗೇಡಿಗಳು ಮತ್ತೆ ಅಶ್ಲೀಲ ಕಮೆಂಟ್, ಅವಹೇಳನಮಾಡುವ ರೀತಿಯ ಆಕ್ಷೇಪಾರ್ಹ ಪದ ಬಳಕೆ ಮುಂದುವರೆಸಿದ್ದಾರೆ. ಇದೀಗ ನಟಿ ಐಶ್ವರ್ಯಾ ಸಿಂಧೋಗಿ ಅವರಿಗೆ ಕಿಡಿಗೇದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದು, ನಟಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ನಟಿ ಐಶ್ವರ್ಯಾ ಸಿಂಧೋಗಿ ಅವರ ಪೋಸ್ಟ್‌ಗಳಿಗೆ ಸತತವಾಗಿ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಕಮೆಂಟ್‌ಗಳನ್ನು ಮಾಡಲಾಗುತ್ತಿದೆಯಂತೆ. ಈ ಬಗ್ಗೆ ಸ್ವತಃ ಐಶ್ವರ್ಯಾ ಸಿಂಧೋಗಿ ಸಂಜಯ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮಗೆ ಪರಿಚಯವಿರುವ ವ್ಯಕ್ತಿಯೊಬ್ಬರ ಹೆಸರನ್ನು ಕೂಡ ಉಲ್ಲೇಖಿಸಿ ದೂರು ದಾಖಲಿಸಿದ್ದಾರೆ.

Home add -Advt

ಈ ಹಿಂದೆ ಕೂಡ ಇದೇ ವ್ಯಕ್ತಿ ಐಶ್ವರ್ಯಾಗೆ ಬೆದರಿಕೆ ಹಾಕಿದ್ದರು. ಆ ವೇಳೆ ಕೇಸ್ ದಾಖಲಾಗಿತ್ತು. ಈಗ ಅದೇ ವ್ಯಕ್ತಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಅವುಗಳ ಮೂಲಕ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ. ತಮಗೆ ತೊಂದರೆ ನೀಡುತ್ತಿರುವ ಆ ನಕಲಿ ಖಾತೆಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಐಶ್ವರ್ಯಾ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Related Articles

Back to top button