
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ ‘ಭಜರಂಗಿ-2’ ಸಿನಿಮಾ ಸೆಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.
ಶಿವಾರಾಜ್ ಕುಮಾರ್ ನಟನೆಯ ಭಜರಂಗಿ-2 ಚಿತ್ರದ ಚಿತ್ರೀಕರಣಕ್ಕಾಗಿ ದಾವಣಗೆರೆಯಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ಗುಹೆಯ ರೀತಿಯಲ್ಲಿ ಸೆಟ್ ನಿರ್ಮಿಸಲಾಗಿತ್ತು. ಏಕಾಏಕಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸೆಟ್ನ ಅರ್ಧ ಭಾಗ ಸುಟ್ಟು ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ವೇಳೆ ಶಿವರಾಜ್ ಕುಮಾರ್, ನಿರ್ದೇಶಕರು, ತಂತ್ರಜ್ನರು ಸೇರಿದಂತೆ 100ಕ್ಕೂ ಹೆಚ್ಚು ಜನರು ಸೆಟ್ ನಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಇನ್ನು ಬೆಂಕಿ ದುರಂತದಲ್ಲಿ ಯಾವುದೇ ಪ್ರಾಣಾಪಾಯವಾಗಲೀ, ಯಾರಿಗೂ ಯವುದೇ ತೊಂದರೆಗಳಾಗಲಿ ಸಂಭವಿಸಿಲ್ಲ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ.
ಎ. ಹರ್ಷ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಭಜರಂಗಿ-2 ಚಿತ್ರದಲ್ಲಿ ಶಿವರಾಜ್ ಕುಮಾರ್ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಶಿವಣ್ಣನ ಹೊಸ ಲುಕ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಅಲ್ಲದೇ ಶಿವಣ್ಣನ ಹೊಸ ಅವತಾರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ