
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ ಬುಲೆಟ್ ಪ್ರಕಾಶ್ ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 44 ವರ್ಷ ವಯಸ್ಸಾಗಿತ್ತು.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬುಲೆಟ್ ಪ್ರಕಾಶ್ ಅವರನ್ನು ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ.
ಬುಲೆಟ್ ಪ್ರಕಾಶ 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ದ್ರುವ, ಪಾರ್ಥ, ಓ೦ಕಾರ, ಅ೦ಬಿ, ಮಾಸ್ತ್ ಮಜಾ ಮಾಡಿ, ಐತಲಕ್ಕಡಿ, ಜಾಕಿ, ಮಲ್ಲಿಕಾರ್ಜುನ, ದೆವ್ರಾಣೆ, ರಜಿನಿ ಕಾ೦ತ, ಪಾರಾರಿ, ಜಟಾಯು, ಜ೦ಗಲ್ ಜಾಕಿ ,ಸವಾಲ್ , ಲವ್ ಶೋ, ನಿ೦ಬೆ ಹುಳಿ, ಪು೦ಗಿ ದಾಸ, ರೋಜ್, ಆರ್ಯನ್, ಮಾಸ್ಟರ್ ಮೈ೦ಡ್ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳಲ್ಲಿ ಅಭಿನಯಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ