Latest

ಸ್ಯಾಂಡಲ್ ವುಡ್ ನ ಈ ದಂಪತಿಗಳಿಗೆ ಕೊರೊನಾ ಪಾಸಿಟೀವ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಚಿತ್ರರಂಗಕ್ಕೂ ಕಾಲಿಟ್ಟಿದೆ. ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದಿದ್ದಾರೆ.

ಅಲ್ಲದೆ ನಮ್ಮ ಜೊತೆ ಸಂಪರ್ಕದಲ್ಲಿದ್ದವರು ಈ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದೂ ಮನವಿ ಕೂಡ ಮಾಡಿಕೊಂಡಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button