Film & EntertainmentKannada NewsKarnataka NewsLatest

*ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ನಂಬಿಸಿ ಯುವತಿಗೆ ವಂಚನೆ; ನಿರ್ದೇಶಕನ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ಹೇಳಿ ಸ್ಯಾಂಡಲ್ ವುಡ್ ನಿರ್ದೇಶಕರೊಬ್ಬರು ಯುವತಿಗೆ ವಂಚಿಸಿರುವ ಘಟನೆ ನಡೆದಿದೆ.

ರಂಗಿನ ರಾಟೆ ಸಿನಿಮಾ ನಿರ್ದೇಶಕ ಸಂತೋಷ್ ವಿರುದ್ಧ ಆರೋಪ ಕೇಳಿಬಂದಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾರೆ ಎಂದು ಯುವತಿ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ದೂರು ನೀಡಿದ್ದಾರೆ.

Home add -Advt

ಸಿನಿಮಾದಲ್ಲಿ ನಟಿಸಲು ಚಾನ್ಸ್ ಕೊಡೋದಾಗಿ ಹೇಳಿ ನಂಬಿಸಿದ್ದ ನಿರ್ದೇಶಕ ಸಂತೋಷ್, ಅದನ್ನೇ ಬಂಡವಾಳ ಮಾಡಿಕೊಂಡು ಯುವತಿಯಿಂದಲೇ ಹಣ ಪಡೆದಿದ್ದಾರೆ ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button