Latest

ಕೊನೆಗೂ ಸಿಸಿಬಿ ವಿಚಾರಣೆಗೆ ಹಾಜರಾದ ಅನುಶ್ರೀ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ನಿರೂಪಕಿ ಅನುಶ್ರೀ ಕೊನೆಗೂ ಇಂದು ಮಂಗಳೂರು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಂಗಳೂರು ಪಣಂಬೂರು ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿರುವ ಅನುಶ್ರೀ ಅವರನ್ನು ಎಸಿಪಿ ಬೆಳ್ಳಿಯಪ್ಪ ನೇತೃತ್ವದ ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಅನುಶ್ರೀ ಅವರನ್ನು ಸಿಸಿಬಿ ವಶಕ್ಕೆ ಪಡೆಯಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Home add -Advt

ಇನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಡಾನ್ಸರ್ ಕಿಶೋರ್ ಶೆಟ್ಟಿ ಹಾಗೂ ತರುಣ್ ನೀಡಿದ್ದ ಮಾಹಿತಿ ಆಧರಿಸಿ ಮಂಗಳೂರು ಸಿಸಿಬಿ ಪೊಲೀಸರು ಅನುಶ್ರೀ ಅವರಿಗೆ ಸೆ.24ರಂದು ನೋಟೀಸ್ ನೀಡಿದ್ದರು. ನಿನ್ನೆಯೇ ವಿಚಾರಣೆಗೆ ಹಾಜರಾಗುವುದಾಗಿ ಹೇಳಿ ಮಂಗಲೂರು ತೆರಳಿದ್ದ ಅನುಶ್ರೀ ಸಂಜೆವರೆಗೂ ವಿಚಾರಣೆಗೆ ಹಾಜರಾಗಿರಲಿಲ್ಲ. ಇಂದು ಬೆಳಿಗ್ಗೆ ವಿಚಾರಣೆಗೆ ಪಣಂಬೂರು ಠಾಣೆಗೆ ಹಾಜರಾಗಿದ್ದು, ಈಗಾಗಲೇ ಅನುಶ್ರೀ ವಿಚಾರಣೆ ಆರಂಭಗೊಂಡಿದೆ.

Related Articles

Back to top button