ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ನಟಿಯ ವಿರುದ್ಧ ಅಪರಾಧ, ಒಳಸಂಚು ಆರೋಪದಡಿ ರಾಗಿಣಿ ವಿರುದ್ಧ ಕೇಸ್ ದಾಖಲಾಗಿದೆ.
ಈಗಾಗಲೇ ಸಿಸಿಬಿಯಿಂದ ಬಂಧನಕ್ಕೀಡಾಗಿರುವ ರಾಗಿಣಿ, ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ನಟಿ ರಾಗಿಣಿ ವಿರುದ್ಧ ಅಪರಾಧ, ಒಳಸಂಚು ಆರೋಪದಡಿ ಪ್ರಕರಣ ದಾಖಲಾಗಿದೆ. ಅಲ್ಲದೇ ಎನ್ ಡಿಪಿಎಸ್ ಕಾಯ್ದೆ 21, 21(c), 27, 27(b), 29, ಐಪಿಸಿ ಸೆಕ್ಷನ್ 120(b) ಅಡಿಯಲ್ಲೂ ಪ್ರಕರಣ ದಾಖಲಾಗಿದೆ.
ಈ ನಡುವೆ ನಟಿ ರಾಗಿಣಿಯನ್ನು ಸಿಸಿಬಿ ಅಧಿಕಾರಿಗಳು ಇಂದು ಮತ್ತೆ ವಿಚಾರಣೆಗೆ ಒಳಪಡಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ